ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸೇನೆ ಸ್ವತಂತ್ರವಾಗಿ ಕಾರ್ಯಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.
‘ಮಾಧ್ಯಮಗಳು ಮಾಡಿದ ವರದಿಯನ್ನೇ ಜನ ನೋಡುತ್ತಾರೆ. ಹೀಗಾಗೀ ಮಾಧ್ಯಮಗಳು ಜಾಗರೂಕರಾಗಿ ವರದಿ ಮಾಡಬೇಕು ಎಂದರು.
‘ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಸೇನೆಗೆ ಕಾರ್ಯಾಚರಿಸಲು ಎಲ್ಲಾ ಸ್ವಾತಂತ್ರ್ಯ ನೀಡಿದ್ದೇವೆ’ ಎಂದರು.
ಹಲವು ದಿನಗಳಿಂದ ಕಾಶ್ಮೀರದಲ್ಲಿ ಪ್ರತಿಭಟನಾಕಾರರು ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಿಸಿದ್ದರು. ಸೇನೆ ಪರಿಸ್ಥಿತಿಯನ್ನು ಹತೋಟಿಗೆ ತರಲು ನಿರಂತರ ಪ್ರಯತ್ನ ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.