ಕೊಹಿಮಾ: ನಾಗಾಲ್ಯಾಂಡ್ನ ಮೊನ್ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ 3 ಶಂಕಿತ ಉಗ್ರರ ಹತ್ಯೆಯಾಗಿದ್ದು, ಒರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ.
ಈ ಉಗ್ರರು ನ್ಯಾಷನಲ್ ಸೋಶಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ಗೆ ಸೇರಿದವರಾಗಿದ್ದಾರೆ ಎನ್ನಲಾಗಿದೆ. ಅಧಿಕಾರಿಯೂ ಅಸ್ಸಾಂ ರೈಫಲ್ಸ್ಗೆ ಸೇರಿದವರಾಗಿದ್ದಾರೆ. 3 ಮಂದಿ ಯೋಧರಿಗೆ ಗಾಯಗಳಾಗಿವೆ.
ಈ ಉಗ್ರರು ಇಲ್ಲಿ ಸಕ್ರಿಯರಾಗಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ರಾತ್ರಿ 11 ಗಂಟೆಯ ಸುಮಾರಿಗೆ ಎನ್ಕೌಂಟರ್ ಆರಂಭಿಸಲಾಯಿತು.
ಹಲವಾರು ಗಂಟೆಗಳ ಕಾಲ ಇದು ಮುಂದುವರೆದಿತ್ತು. ಬಳಿ 3 ಉಗ್ರರ ಮೃತ ದೇಹ ಪತ್ತೆಯಾಯಿತು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.