ಅಸ್ತಾನ: ಕಜಕೀಸ್ತಾನದ ಅಸ್ತಾನದಲ್ಲಿ ಶುಕ್ರವಾರ ನಡೆಯುತ್ತಿರುವ ಶಾಂಘೈ ಕೊಅಪರೇಶನ್ ಆರ್ಗನೈಝೇಶನ್ನ ಸಮಿತ್ನಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನ ಸಮಸ್ಯೆಯನ್ನು ಎದುರಿಸಲು ನಾವೆಲ್ಲಾ ಸಂಘಟಿತ ಪ್ರಯತ್ನ ನಡೆಸಬೇಕು ಎಂದರು.
ಸಮಿತ್ಗೂ ಮೊದಲು ಚೀನಾ ಪ್ರಧಾನಿ ಕ್ಸಿ ಝಿನ್ಪಿಂಗ್ ಅವರನ್ನು ಭೇಟಿಯಾದ ಮೋದಿ, ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯ ಬಗ್ಗೆ ಮಾತುಕತೆ ನಡೆಸಿದರು. ಅಲ್ಲದೇ ಶಾಂಘೈ ಕೊಅಪರೇಶನ್ ಆರ್ಗನೈಝೇಶನ್ನ ಸದಸ್ಯತ್ವ ಪಡೆಯಲು ಸಹಕರಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಚೀನಾ ಮತ್ತು ಭಾರತದ ನಡುವೆ ಇರುವ ಭಿನ್ನಾಭಿಪ್ರಾಯಗಳು ಎಂದಿಗೂ ವಿವಾದವಾಗಿ ತಿರುಗಬಾರದು. ಸರಿಯಾಗಿ ನಿಭಾಯಿಸಿದರೆ ಉತ್ತಮ ಅವಕಾಶಗಳಾಗಿ ಪರಿವರ್ತನೆಯಾಗಬಹುದು ಎಂದು ಕ್ಸಿ ಭೇಟಿಯ ವೇಳೆ ಮೋದಿ ತಿಳಿಸಿದರು ಎಂದು ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.