ಮಾನ್ಸಾ : ಪಂಜಾಬ್ನಲ್ಲಿ ಅಂತರ್ಜಲ ಕುಸಿಯುತ್ತಿರುವ ಈ ಸಂದರ್ಭದಲ್ಲಿ ಅಲ್ಲಿನ ಮಾನ್ಸಾ ಎಂಬ ಪುಟ್ಟ ಗ್ರಾಮ ಜಲಸಂರಕ್ಷಣೆಯಲ್ಲಿ ದೇಶಕ್ಕೇ ಮಾದರಿಯಾಗಿದೆ. ತನ್ನ ಈ ಮಹತ್ವದ ಕಾರ್ಯಕ್ಕಾಗಿ ಅದು ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯುತ್ತಿದೆ.
2015-16 ನೇ ಸಾಲಿನ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಕೊಡಲ್ಪಡುವ ರಾಷ್ಟ್ರೀಯ ಪ್ರಶಸ್ತಿಗೆ ಪಂಜಾಬ್ನ ಮಾನ್ಸಾ ಭಾಜನವಾಗಿದೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಜೂನ್ 19 ರಂದು ದೆಹಲಿಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮಾನ್ಸಾ ಗ್ರಾಮವು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಜಲಸಂರಕ್ಷಣೆಗಾಗಿ ಅತ್ಯಂತ ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳಿಸಿದೆ. ಇದಕ್ಕಾಗಿ ಅಲ್ಲಿನ ಪಂಚಾಯತ್ನ್ನು ರಾಷ್ಟ್ರೀಯ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
ಈ ಗ್ರಾಮದ ಪ್ರತಿಯೊಬ್ಬರು ಇಂಗು ಗುಂಡಿ ಮತ್ತು ಸಿಮೆಂಟ್ನಿಂದ ತಯಾರಾದ ಟ್ಯಾಂಕ್ಗಳಲ್ಲಿ ಮಳೆ ನೀರನ್ನು ಸಂಗ್ರಹಿಸುವ ಮೂಲಕ ಮಳೆ ನೀರನ್ನು ಸಂರಕ್ಷಿಸುತ್ತಾರೆ.
ಮನ್ರೇಗಾ ಯೋಜನೆಯಡಿ ಇದನ್ನು ಅತ್ಯಂತ ಸಮರ್ಪಕ ರೀತಿಯಲ್ಲಿ ಅನುಷ್ಠಾನ ಮಾಡುತ್ತಿದ್ದಾರೆ. ಅಲ್ಲದೆ ಇಲ್ಲಿನ ಪಂಚಾಯತ್ ಜಲ ಸಂರಕ್ಷಣೆಯ ಬಗ್ಗೆ ಹಲವಾರು ಕಡೆಗಳಲ್ಲಿ ವಾಲ್ ಪೇಯಿಂಟ್ಗಳನ್ನು ರಚಿಸಿದೆ. ಇಲ್ಲಿನ ಇಂಗು ಗುಂಡಿ ಯೋಜನೆಯು ತ್ಯಾಜ್ಯ ನೀರನ್ನು ನಿರ್ವಹಣೆ ಮಾಡುತ್ತದೆ. ಇದರಿಂದ ಗ್ರಾಮವು ಬರ ಮುಕ್ತವಾಗಿದೆ.
ಈ ಯೋಜನೆಯನ್ನು 2015 ರಿಂದ ಇಲ್ಲಿ ಅನುಷ್ಠಾನಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.