ವಾಷಿಂಗ್ಟನ್: ಭಾರತ-ಅಮೆರಿಕ ನಡುವಣ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಲುವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ಭಾರತದ ಗ್ರಾಮವೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿಡಲು ಮುಂದಾಗಿದ್ದಾರೆ.
ಸುಲಭ್ ಇಂಟರ್ನ್ಯಾಷನಲ್ ಸಂಸ್ಥಾಪಕ ಮತ್ತು ಮುಖ್ಯಸ್ಥ ಬಿಂದೇಶ್ವರ್ ಪಾಟಕ್ ಅವರು ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಮಾರಂಭದಲ್ಲಿ ಈ ಬಗ್ಗೆ ಘೋಷಣೆ ನಡೆಸಿದ್ದಾರೆ.
ರಾಜಸ್ಥಾನದ ಮೇವತ್ ಪ್ರದೇಶದಲ್ಲಿ ಟ್ರಂಪ್ ಗ್ರಾಮವನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಯುಎಸ್-ಭಾರತ ಸಂಬಂಧವನ್ನು ಬಲಿಷ್ಠಗೊಳಿಸುವ ಭಾಗವಾಗಿ ಟ್ರಂಪ್ ಹೆಸರನ್ನು ಗ್ರಾಮಕ್ಕೆ ಇಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.