Tuesday, 20th February 2018
×
Home About Us Advertise With s Contact Us

ಸಲ್ಮಾನ್ ಹೇಳಿಕೆ ರೆಕಾರ್ಡ್ ವೇಳೆ ಮಾಧ್ಯಮಗಳಿಗೆ ನಿರ್ಬಂಧ ಇಲ್ಲ

salmamnಮುಂಬಯಿ: 2002ರ ಕುಡಿದು ಕಾರು ಓಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆ ಸಂಗ್ರಹಿಸುವ ಸಂದರ್ಭ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಕೋರಿ ಶುಕ್ರವಾರ ಬಾಲಿವುಡ್ ನಟ ಸಲ್ಮಾನ್ ಖಾನ್ ಸೆಷನ್ಸ್ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.

ನ್ಯಾಯಧೀಶ ಡಿ.ಡಬ್ಲ್ಯೂ ದೇಶ್‌ಪಾಂಡೆ ಈ ಮನವಿಯನ್ನು ತಿರಸ್ಕರಿಸಿದ್ದಾರೆ. ಆದರೆ ಸಲ್ಮಾನ್ ಅವರ ಹೇಳಿಕೆಯನ್ನು ಸಂಪೂರ್ಣವಾಗಿ ರೆಕಾರ್ಡ್ ಮಾಡಿದ ಮುಗಿಸಿದ ಬಳಿಕವೇ ವರದಿ ಮಾಡಬೇಕು ಎಂದು ಮಾಧ್ಯಮಗಳಿಗೆ ಸೂಚಿಸಿದ್ದಾರೆ.

ಅಲ್ಲದೇ ಈ ವಿಷಯದ ಬಗ್ಗೆ ಅಭಿಪ್ರಾಯ ಸೃಷ್ಟಿಸುವುದು ಅಥವಾ ಪ್ರಕರಣದ ಮೆರಿಟ್, ಡಿಮೆರಿಟ್‌ಗಳನ್ನು ಚರ್ಚಿಸುವುದಾಗಲಿ ಮಾಡಬಾರದು, ನ್ಯಾಯಾಲಯ ಪ್ರಕ್ರಿಯೆಯನ್ನು ಇದ್ದ ಹಾಗೆಯೇ ವರದಿ ಮಾಡಬೇಕು ಎಂದು ತಾಕೀತು ಮಾಡಿದೆ.

ಇಂದು ಪ್ರಕರಣದ ಬಗ್ಗೆ ಸಲ್ಮಾನ್ ಅವರ ಹೇಳಿಕೆಯನ್ನು ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ ಅವರು ಈಗಾಗಲೇ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top