ಚಂಡೀಗಢ: ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಹದಗೆಡುತ್ತಿರುವ ಹಿನ್ನಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೇಂದರ್ ಸಿಂಗ್ ಅವರು ರಾಜ್ಯಾದ್ಯಂತ ವೆಲ್ನೆಸ್ ಮೊಹಲ್ಲಾ(ವಾರ್ಡ್) ಕ್ಲಿನಿಕ್ಗಳನ್ನು ತೆರೆಯುವುದಾಗಿ ಘೋಷಿಸಿದ್ದಾರೆ.
ಕೈಗೆಟುಕುವ ದರದಲ್ಲಿ ಆರೋಗ್ಯ ಸೌಲಭ್ಯಗಳನ್ನು ಎಲ್ಲಾ ನಾಗರಿಕರು ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಆರೋಗ್ಯ ವಿಮಾ ಯೋಜನೆಯನ್ನು ಆರಂಭಿಸುತ್ತಿದ್ದೇವೆ, ಇದಕ್ಕಾಗಿ ಪ್ರಕ್ರಿಯೆಗಳು ಆರಂಭಗೊಂಡಿವೆ ಎಂಬುದಾಗಿಯೂ ಅವರು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ಖಾಯಿಲೆಗಳ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಇನ್ನು 3 ತಿಂಗಳಲ್ಲಿ ತಮ್ಮ ಸರ್ಕಾರ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಆರೋಗ್ಯ ತಪಾಸಣೆ ಮಾಡುವ ಕಾರ್ಯವನ್ನು ಆರಂಭಿಸಲಿದೆ ಎಂದರು.
ಅಲ್ಲದೇ ಸ್ಕೂಲ್ ಹೆಲ್ತ್ ಪ್ರೋಗ್ರಾಂಗಳನ್ನೂ ಮರು ಜಾರಿಗೊಳಿಸಿ ನಿರಂತರ ಆರೋಗ್ಯ ತಪಾಸಣೆ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.