ಅಹ್ಮದಾಬಾದ್: ಕಳೆದ 10 ವರ್ಷಗಳಲ್ಲಿ ವಿದೇಶದಿಂದ ಆಗಮಿಸುವ ಪ್ರವಾಸಿಗರ ಸಂಖ್ಯೆಯು ಮಹತ್ವದ ಶೇ.97ರಷ್ಟು ಪ್ರಗತಿ ಕಂಡಿದೆ ಎಂದು ಪ್ರವಾಸೋದ್ಯಮ ಸಚಿವಾಲಯ ತಿಳಿಸಿದೆ.
‘2006ರಲ್ಲಿ 44,47,167 ವಿದೇಶಿ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದರು, 2016ರಲ್ಲಿ ಈ ಸಂಖ್ಯೆ 87,81,630ಕ್ಕೆ ಏರಿಕೆ ಕಂಡಿದೆ’ ಎಂದು ಆರ್ಟಿಐ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವಾಲಯ ಉತ್ತರಿಸಿದೆ.
ವಿದೇಶಿ ಪ್ರವಾಸಿಗರ ಹೆಚ್ಚಳಕ್ಕೆ ಕಾರಣ ಏನು ಎಂಬ ಬಗ್ಗೆ ಯಾವುದೇ ಅಧ್ಯಯನ ಅಥವಾ ಸಮೀಕ್ಷೆಯನ್ನು ಸಚಿವಾಲಯ ಕೈಗೊಂಡಿಲ್ಲ, ಆದರೆ ಇ-ವೀಸಾ ಇದಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ನಂಬಲಾಗಿದೆ.
ಇ-ವೀಸಾ ಸೌಲಭ್ಯವನ್ನು 161 ದೇಶಗಳಿಗೆ ವಿಸ್ತರಿಸಿದ ಪರಿಣಾಮವಾಗಿ ಇ-ವೀಸಾ ಮೂಲಕ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ದುಪ್ಪಟ್ಟಾಗಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.