ನವದೆಹಲಿ: ಜುಲೈ 17ರಿಂದ ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಇದೇ ದಿನ ರಾಷ್ಟ್ರಪತಿ ಚುನಾವಣೆಯೂ ಏರ್ಪಡಲಿದೆ.
ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಜುಲೈ 17ರಿಂದ ಆಗಸ್ಟ್ 11ರವರೆಗೆ ಮಳೆಗಾಲದ ಅಧಿವೇಶನ ನಡೆಸಲು ಶಿಫಾರಸ್ಸು ಮಾಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ರಾಷ್ಟ್ರಪತಿ ಅಭ್ಯರ್ಥಿ ರಾಮ್ನಾಥ್ ಕೋವಿಂದ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಗೃಹಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ ನಡೆದಿತ್ತು.
ಲೋಕಸಭಾ ಸದಸ್ಯ ವಿನೋದ್ ಖನ್ನಾ ಮತ್ತು ರಾಜ್ಯಸಭಾ ಸದಸ್ಯೆ ಪಲ್ಲವಿ ರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಬಳಿಕ ಕಲಾಪ ಆರಂಭಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.