ನವದೆಹಲಿ: ಜಗತ್ತಿನಾದ್ಯಂತ ಇಂದು ಮುಸ್ಲಿಂ ಧರ್ಮಿಯರು ಈದ್-ಉಲ್-ಫಿತ್ರ್ ಹಬ್ಬವನ್ನು ಆಚರಿಸುತ್ತಿದ್ದು, ದೇಶದ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೇರಿದಂತೆ ಹಲವಾರು ಗಣ್ಯರು ಶುಭ ಕೋರಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘ಈದ್ ಉಲ್ ಫಿತ್ರ್ನ ಶುಭಾಶಯಗಳು. ಈ ಪವಿತ್ರ ದಿನ ಸಮಾಜದ ಶಾಂತಿ ಮತ್ತು ಸಹೋದರತೆಯ ಸ್ಫೂರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ’ ಎಂದಿದ್ದಾರೆ.
ರಾಷ್ಟ್ರಪತಿಗಳೂ ಈ ಹಬ್ಬ ಶಾಂತಿ, ಸಮೃದ್ಧಿ, ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ.
ಗೃಹಸಚಿವ ರಾಜನಾಥ್ ಸಿಂಗ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವಾರು ಗಣ್ಯರು ಈದ್ ಹಬ್ಬದ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಶುಭಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.