ಜೆರುಸೆಲಂ: ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ತನ್ನ ದೇಶಕ್ಕೆ ಆಗಮಿಸುತ್ತಿದ್ದಾರೆ ಎಂದು ಇಸ್ರೋಲ್ ಘೋಷಿಸಿದೆ. ಮೋದಿ ಈ ದೇಶಕ್ಕೆ ತೆರಳುತ್ತಿರುವ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ.
ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮೀನ್ ನೆತನ್ಯಾಹು ಅವರು ಮೋದಿ ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ.
‘ಮುಂದಿನ ವಾರ ಭಾರತದ ಪ್ರಧಾನಿ, ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ಗೆ ಆಗಮಿಸಿದ್ದಾರೆ. ಇದೊಂದು ಐತಿಹಾಸಿಕ ಭೇಟಿಯಾಗಿದೆ. 70 ವರ್ಷಗಳ ದೇಶದ ಅಸ್ತಿತ್ವದಲ್ಲಿ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಡಲಿಲ್ಲ’ ಎಂದು ಬೆಂಜಮಿನ್ ಹೇಳಿದ್ದಾರೆ.
ಮೋದಿ ಆಗಮನ ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಗಟ್ಟಿಗೊಳಿಸಲಿದೆ. ಭಾರತ 1.25 ಮಿಲಿಯನ್ ಜನಸಂಖ್ಯೆಯಿರುವ ದೊಡ್ಡ ದೇಶ, ವಿಶ್ವದ ಅತೀ ವೇಗದ ಆರ್ಥೀಕ ಪ್ರಗತಿಯನ್ನು ಹೊಂದಿದ ದೇಶ. ಭಾರತ-ಇಸ್ರೇಲ್ ಸಂಬಂಧ ಏರುಗತಿಯಲ್ಲೇ ಇರುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.