ನವದೆಹಲಿ: ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟ ಹಣದ ಪ್ರಮಾಣ ದಾಖಲೆ ಮಟ್ಟದಲ್ಲಿ ಕುಸಿತವಾಗುತ್ತಿದೆ. 2016ರಲ್ಲಿ ಸುಮಾರು 4,500 ಕೋಟಿಯಷ್ಟು ಕುಸಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಸ್ವಿಸ್ ಬ್ಯಾಂಕುಗಳಲ್ಲಿ ಹಣ ಇಟ್ಟವರ ಮಾಹಿತಿಗಳು ಬಹಿರಂಗವಾಗುತ್ತಿರುವ ಹಿನ್ನಲೆಯಲ್ಲಿ ಈ ಬೆಳವಣಿಗೆ ನಡೆಯುತ್ತಿದೆ ಎನ್ನಲಾಗಿದೆ.
2006ರಲ್ಲಿ ಭಾರತೀಯರು ಇಟ್ಟ ಹಣದ ಪ್ರಮಾಣ 23ಸಾವಿರ ಕೋಟಿಯಷ್ಟಿತ್ತು, ಇದೀಗ ಅದರ ಪ್ರಮಾಣ 4,500 ಕೋಟಿಗೆ ಇಳಿಕೆಯಾಗಿದೆ.
ಭಾರತೀಯರ ಒಟ್ಟು ಹಣದ ಪ್ರಮಾಣ ಶೆ.45ರಷ್ಟು ಕುಸಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಇತರ ರಾಷ್ಟ್ರಗಳು ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿರುವ ಹಣದ ಪ್ರಮಾಣ 2016ರಲ್ಲಿ 94 ಲಕ್ಷ ಕೋಟಿಯಿಂದ 96 ಲಕ್ಷ ಕೋಟಿಗೆ ಏರಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.