ನವದೆಹಲಿ: ಜನಸಂಘದ ಸಂಸ್ಥಾಪಕ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನವನ್ನು ಇಂದು ದೇಶದಲ್ಲಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮುಖರ್ಜಿ ಅವರನ್ನು ಸ್ಮರಿಸಿಕೊಂಡರು.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ‘ಮುಖರ್ಜಿ ಅವರ ಜನ್ಮದಿನದಂದು ನಾವು ಅವರನ್ನು ಸ್ಮರಿಸುತ್ತೇವೆ. ಅವರು ಭಾರತಕ್ಕೆ ನೀಡಿದ ಕೊಡುಗೆ ಮತ್ತು ಅವರ ಪಾಂಡಿತ್ಯ ಎಂದಿಗೂ ಮರೆಯಲಾಗದು’ ಎಂದಿದ್ದಾರೆ.
Remembering Dr. Syama Prasad Mookerjee on his birth anniversary. His contribution to India & scholarly nature can never be forgotten.
— Narendra Modi (@narendramodi) July 6, 2017
ಕೋಲ್ಕತ್ತಾದಲ್ಲಿ 1901ರ ಜುಲೈ 6ರಂದು ಜನಿಸಿದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜವಾಹಾರ್ ಲಾಲ್ ನೆಹರೂ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕಾಂಗ್ರೆಸ್ನ್ನು ತೊರೆದು ಜನಸಂಘವನ್ನು ಸ್ಥಾಪನೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.