ನವದೆಹಲಿ : ದೆಹಲಿ ವಿಶ್ವವಿದ್ಯಾನಿಲಯವು ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆಯನ್ನು ತನ್ನ ಶೈಕ್ಷಣಿಕ ವಿಷಯದಲ್ಲಿ ಅಳವಡಿಸಿಕೊಳ್ಳಲು ಮುಂದಾಗಿದೆ.
ಈ ವಿಶ್ವವಿದ್ಯಾನಿಲಯದಲ್ಲಿ ವಾಣಿಜ್ಯ ವಿಷಯ ಕಲಿಯುತ್ತಿರುವ ವಿದ್ಯಾರ್ಥಿಗಳು ಇನ್ನು ಜಿಎಸ್ಟಿಯನ್ನು ಕೂಡಾ ಅಧ್ಯಯನ ಮಾಡಬೇಕಾಗುತ್ತದೆ.
ಸ್ವಾತಂತ್ರ್ಯದ ಬಳಿಕ ಭಾರತದ ಅತಿ ದೊಡ್ಡ ತೆರಿಗೆ ಸುಧಾರಣೆ ಎಂದು ಜಿಎಸ್ಟಿಯನ್ನು ಪರಿಗಣಿಸಲಾಗಿದ್ದು ಇದು ಎಲ್ಲಾ ಪರೋಕ್ಷ ತೆರಿಗೆಗಳನ್ನು ತೆಗೆದು ಹಾಕಿ ಒಂದೇ ತೆರಿಗೆಯನ್ನು ದೇಶದಲ್ಲಿ ಸ್ಥಾಪಿಸಿದೆ.
ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸಮಿತಿಯು ಜಿಎಸ್ಟಿಯನ್ನು ಬಿ.ಕಾಂ., ಬಿ.ಎ., ಮುಂತಾದ ಕೋರ್ಸ್ಗಳಲ್ಲಿ ಅಳವಡಿಸಿಕೊಳ್ಳಲು ಅನುಮೋದನೆ ನೀಡಿದೆ.
ವಾಣಿಜ್ಯ ವಿದ್ಯಾರ್ಥಿಗಳಲ್ಲಿ ಜಿಎಸ್ಟಿ ಬಗ್ಗೆ ಸಂಪೂರ್ಣ ಜ್ಞಾನವನ್ನು ಮೂಡಿಸುವುದು ಇದರ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.