ನವದೆಹಲಿ: ಕಾಂಗ್ರೆಸ್ ಸೇರಿದಂತೆ ಒಟ್ಟು 17 ವಿಪಕ್ಷಗಳು ಸೋಮವಾರ ಮಹಾತ್ಮ ಗಾಂಧೀಜಿಯವರ ಮೊಮ್ಮಗ ಗೋಪಾಲ್ ಕೃಷ್ಣ ಗಾಂಧಿಯವನ್ನು ಉಪರಾಷ್ಟ್ರತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿವೆ.
ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.
ಪಶ್ಚಿಮಬಂಗಾಳದ ಮಾಜಿ ಗವರ್ನರ್ ಆಗಿ ಗೋಪಾಲ್ ಕೃಷ್ಣ ಗಾಂಧಿ ಸೇವೆ ಸಲ್ಲಿಸಿದ್ದಾರೆ.
ಆಗಸ್ಟ್ ೫ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಬಿಜೆಪಿ ತನ್ನ ಅಭ್ಯರ್ಥಿಯನ್ನು ಇನ್ನಷ್ಟೇ ಘೋಷಿಸಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.