ನವದೆಹಲಿ : ಎರಡು ವರ್ಷಗಳ ನಿಷೇಧದ ಬಳಿಕ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು 20-20 ಕ್ರಿಕೆಟ್ ಲೀಗ್ ಐಪಿಎಲ್ಗೆ ಹಿಂದಿರುಗಿದೆ.
ಶುಕ್ರವಾರ ಬಿಸಿಸಿಐ ಈ ಎರಡು ಐಪಿಎಲ್ ಫ್ರಾಂಚೈಸಿಗಳನ್ನು ಲೀಗ್ಗೆ ಸ್ವಾಗತಿಸಿದೆ.
ಬೆಟ್ಟಿಂಗ್ ಆರೋಪದ ಮೇರೆಗೆ ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ ಆರ್. ಎಂ. ಲೋಧಾ ಅವರ ನೇತೃತ್ವದ ಸಮಿತಿ ಈ ಎರಡು ಫ್ರಾಂಚೈಸಿಗಳಿಗೆ ಐಪಿಎಲ್ಗೆ ಭಾಗವಹಿಸದಂತೆ ಎರಡು ವರ್ಷಗಳ ನಿಷೇಧವನ್ನು ಹೇರಿತ್ತು.
ಈ ಹಿನ್ನೆಲೆಯಲ್ಲಿ ಈ ಎರಡು ತಂಡಗಳು 2016 ಮತ್ತು 2017 ರ ಐಪಿಎಲ್ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.
ಇನ್ನು ಮುಂದಿನ ಐಪಿಎಲ್ಗಳಲ್ಲಿ ಈ ತಂಡಗಳು ಭಾಗವಹಿಸಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.