ನವದೆಹಲಿ: ಗೋ ರಕ್ಷಣೆಯ ಹೆಸರಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದು, ಯಾರೊಬ್ಬರಿಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಮಳೆಗಾಲದ ಅಧಿವೇಶನದ ಆರಂಭದ ಹಿನ್ನಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ ಅವರು ಈ ಮಾತುಗಳನ್ನು ಹೇಳಿದ್ದಾರೆ.
ಗೋವಿನ ರಕ್ಷಣೆಯ ಹೆಸರಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮೋದಿ ಎಲ್ಲಾ ರಾಜ್ಯಗಳಿಗೂ ಕರೆ ನೀಡಿದ್ದಾರೆ, ಯಾವ ವ್ಯಕ್ತಿ ಅಥವಾ ಸಂಘಟನೆಗೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡಬಾರದು ಎಂದಿದ್ದಾರೆ.
‘ಗೋವು ರಕ್ಷಣೆಗೆ ನಮ್ಮ ದೇಶದಲ್ಲಿ ಕಾನೂನಿದೆ. ಗೋವು ರಕ್ಷಣೆ ಹೆಸರಲ್ಲಿ ವೈಯಕ್ತಿಕ ದ್ವೇಷವನ್ನು ತೀರಿಸಿಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.
ಅಲ್ಲದೇ ಕೆಲ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಗೋವುಗಳ ರಕ್ಷಣೆಯನ್ನು ಕೋಮುವಾದ ಎಂಬಂತೆ ಬಿಂಬಿಸುತ್ತಿವೆ. ಇದು ದೇಶದ ಜಾತ್ಯಾತೀತತೆಗೆ ,ಮಾರಕ. ಇವುಗಳಿಗೆ ಜಾತಿಯ ಬಣ್ಣ ನೀಡಬಾರದು. ಇದರಿಂದ ದೇಶಕ್ಕೆ ಯಾವುದೇ ಲಾಭವಿಲ್ಲ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.