ಲಕ್ನೋ: ತಮ್ಮ ಅಧಿಕಾರವಧಿಯಲ್ಲಿ ಉತ್ತರಪ್ರದೇಶದ ಚಿತ್ರಣವನ್ನು ಬದಲಾಯಿಸುವ ಪಣತೊಟ್ಟಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮುಂದಿನ ಐದು ವರ್ಷದಲ್ಲಿ 70 ಲಕ್ಷ ಉದ್ಯೋಗ ಸೃಷ್ಟಿಸಲು ಟಾಗೆಟ್ ಫಿಕ್ಸ್ ಮಾಡಿಕೊಂಡಿದ್ದಾರೆ.
ವಿಶ್ವ ಯುವ ಕೌಶಲ್ಯದಿನದ ಅಂಗವಾಗಿ ನೆರವೇರಿದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ‘ಯುಪಿಯಲ್ಲಿ ಅವಕಾಶಗಳು ಬಹಳಷ್ಟಿವೆ. 5 ವರ್ಷದಲ್ಲಿ 70 ಲಕ್ಷ ಉದ್ಯೋಗ ಸೃಷಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದೇವೆ. ಇದರಲ್ಲಿ 10 ಲಕ್ಷ ಉದ್ಯೋಗಗಳನ್ನು ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮೂಲಕ ನೀಡಲಾಗುತ್ತದೆ’ ಎಂದಿದ್ದಾರೆ.
ಕೌಶಲ್ಯಾಭಿವೃದ್ಧಿಯ ಅಗತ್ಯತೆಯನ್ನು ಯುವ ಜನರು ಮನಗಾನಬೇಕು ಎಂದು ಒತ್ತಿ ಹೇಳಿದ ಅವರು, ಉದ್ಯೋಗ ಸೃಷ್ಟಿಯ ಟಾರ್ಗೆಟ ಸಾಧಿಸಲು ಕೃಷಿ-ಡೈರಿ-ಸಣ್ಣ ಕೈಗಾರಿಕೆ-ಕೈಗಾರಿಕಾ ಅಭಿವೃದ್ಧಿ ಇಲಾಖೆಗಳ ನಡುವೆ ಉತ್ತಮ ಸಹಕಾರ ಇರಬೇಕು ಎಂದರು.
ಯುವಕರನ್ನು ಕೌಶಲ್ಯಭರಿತರನ್ನಾಗಿಸಿ ಅವರಿಗೆ ಮಾರ್ಗದರ್ಶನ ನೀಡುವುದು ಹೆಮ್ಮೆಯ ಸಂಗತಿ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.