ಶ್ರೀನಗರ: 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ಕಲ್ಲು ತೂರಾಟ ಘಟನೆಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಲೋಕಸಭೆಗೆ ಮಾಹಿತಿ ನೀಡಿದೆ.
ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್, ‘2017ರಲ್ಲಿ ಒಟ್ಟು 664 ಕಲ್ಲು ತೂರಾಟ ಘಟನೆಗಳು ನಡೆದಿವೆ, 2016ರಲ್ಲಿ 2,808 ಕಲ್ಲು ತೂರಾಟ ಘಟನೆಗಳು ಕಣಿವೆ ರಾಜ್ಯದಲ್ಲಿ ನಡೆದಿತ್ತು’ ಎಂದು ಹೇಳಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಹಿಂಸಾಚಾರದ ಘಟನೆಗಳೂ ಕಡಿಮೆಯಾಗಿವೆ. 2017ರಲ್ಲಿ ಒಟ್ಟು 172 ಹಿಂಸಾಚಾರ ಘಟನೆಗಳು ನಡೆದಿವೆ.
2016ರಲ್ಲಿ 322 ಘಟನೆಗಳು ನಡೆದಿದ್ದು, ೨೪೭ ಮಂದಿ ಪ್ರಾಣ ತೆತ್ತಿದ್ದಾರೆ. ಇವರಲ್ಲಿ 15 ಮಂದಿ ನಾಗರಿಕರು, 82 ಮಂದಿ ಭದ್ರತಾ ಸಿಬ್ಬಂದಿ ಮತ್ತು 150 ಮಂದಿ ಉಗ್ರರು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.