ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮ ಕಳೆದ ಎರಡು ವರ್ಷದಲ್ಲಿ ಆಲ್ ಇಂಡಿಯಾ ರೇಡಿಯೋಗೆ ಸುಮಾರು 10 ಕೋಟಿಯಷ್ಟು ಆದಾಯವನ್ನು ತಂದುಕೊಟ್ಟಿದೆ.
ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಈ ಬಗ್ಗೆ ಲೋಕಸಭೆಗೆ ಲಿಖಿತ ಮಾಹಿತಿಯನ್ನು ನೀಡಿದ್ದಾರೆ.
‘ಮನ್ ಕೀ ಬಾತ್’ ಕಾರ್ಯಕ್ರಮದಿಂದ 2015-16ನೇ ಸಾಲಿನಲ್ಲಿ ಆಲ್ ಇಂಡಿಯಾ ರೇಡಿಯೋಗೆ ಸುಮಾರು ರೂ.4.78 ಕೋಟಿ ಮತ್ತು 2016-17ನೇ ಸಾಲಿನಲ್ಲಿ 5.19 ಕೋಟಿ ರೂಪಾಯಿ ಆದಾಯವಾಗಿದೆ.
ಮನ್ ಕೀ ಬಾತ್ನ ಮೂಲ ಕಾರ್ಯಕ್ರಮ ಮುಕ್ತಾಯವಾದ ಬಳಿಕ ಅದೇ ದಿನ ಆ ಕಾರ್ಯಕ್ರಮ 18 ಪ್ರಾದೇಶಿಕ ಭಾಷೆಗಳಲ್ಲಿ ಮತ್ತು 33 ಉಪ ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ. ಇಂಗ್ಲೀಷ್ ಮತ್ತು ಸಂಸ್ಕೃತದಲ್ಲೂ ಪ್ರಸಾರವಾಗುತ್ತಿದೆ ಎಂದು ರಾಥೋಡ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.