ಬೆಂಗಳೂರು: ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳು ಕನ್ನಡ ಕಲಿತು, ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2016ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
‘ಯಾವ ರಾಜ್ಯದಲ್ಲಿ ನೇಮಕವಾಗುತ್ತಾರೋ ಅದೇ ರಾಜ್ಯದ ಭಾಷೆಯಲ್ಲಿ ಐಎಎಸ್ ಅಧಿಕಾರಿಗಳು ವ್ಯವಹರಿಸಬೇಕು. ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬಂದ ಅಧಿಕಾರಿಗಳು ಕನ್ನಡ ಕಲಿಯಬೇಕು’ ಎಂದಿದ್ದಾರೆ.
ಯುಪಿಎಸ್ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ ನಂದಿನಿ ಮತ್ತು ಕನ್ನಡದಲ್ಲೇ ಪರೀಕ್ಷೆ ಬರೆದು ಪಾಸಾದ ಇತರ 6 ಮಂದಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.