ಲಂಡನ್: ಮಹಿಳಾ ವಿಶ್ವಕಪ್ನಲ್ಲಿ ಭಾರತೀಯ ತಂಡವನ್ನು ಫೈನಲ್ವರೆಗೆ ಕೊಂಡೊಯ್ದ ಅಪ್ರತಿಮ ಆಟಗಾರ್ತಿ ಮಿಥಾಲಿ ರಾಜ್ ಅವರನ್ನು ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಸೋಮವಾರ ‘ಐಸಿಸಿ ವುಮೆನ್ಸ್ ವರ್ಲ್ಡ್ ಕಪ್ 2017 ಟೀಮ್’ನ ಕ್ಯಾಪ್ಟನ್ ಆಗಿ ನೇಮಿಸಿದೆ.
34 ವರ್ಷದ ಮಿಥಾಲಿ ಅವರು ವಿಶ್ವಕಪ್ನಲ್ಲಿ ನಾಯಕಿಯಾಗಿಯೂ, ವೈಯಕ್ತಿಕವಾಗಿಯೂ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು 11 ಮಂದಿಯ ಐಸಿಸಿ ಮಹಿಳಾ ವಿಶ್ವಕಪ್ ಟೀಮ್ನ ನಾಯಕಿಯನ್ನಾಗಿ ನೇಮಗೊಳಿಸಲಾಗಿದೆ.
ಐಸಿಸಿ ಮಹಿಳಾ ವಿಶ್ವಕಪ್ 2017 ತಂಡವನ್ನು ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಘೋಷಣೆ ಮಾಡಿದ್ದು, ಇದರಲ್ಲಿ ಭಾರತದ ದೀಪ್ತಿ ಶರ್ಮಾ ಮತ್ತು ಹರ್ಮನ್ ಪ್ರೀತ್ ಕೌರ್ ಕೂಡ ಇದ್ದಾರೆ. ಇಂಗ್ಲೆಂಡ್ನ ನಾಲ್ಕು ಆಟಗಾರ್ತಿಯರು ಟೀಮ್ನಲ್ಲಿ ಸೇರ್ಪಡೆಯಾಗಿದ್ದಾರೆ. ದಕ್ಷಿಣ ಆಫ್ರಿಕಾದ 3 ಮತ್ತು ಆಸ್ಟ್ರೇಲಿಯಾದ ಒರ್ವ ಆಟಗಾರ್ತಿ ಇದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.