ನವದೆಹಲಿ: ಮಹಿಳಾ ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದ ಆಟಗಾರ್ತಿ ಹರ್ಮಾನ್ ಪ್ರೀತ್ ಕೌರ್ ಅವರಿಗೆ ಪಂಜಾಬ್ ಸರ್ಕಾರದಿಂದ ಅಪಾರ ಗೌರವ ಲಭಿಸಿದೆ.
ಅಲ್ಲಿನ ಸಿಎಂ ಕ್ಯಾ.ಅಮರೇಂದರ್ ಸಿಂಗ್ ಅವರು ಕೌರ್ಗೆ 5 ಲಕ್ಷ ಸಹಾಯಧನ ಘೋಷಣೆ ಮಾಡಿದ್ದು ಮಾತ್ರವಲ್ಲದೇ, ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಹುದ್ದೆ ನೀಡುವುದಾಗಿ ಹೇಳಿದ್ದಾರೆ.
ಅಲ್ಲದೇ ಪಂಜಾಬ್ನ ಕ್ರೀಡಾ ನಿಯಮಗಳಿಗೆ ಬದಲಾವಣೆ ತಂದು ಯುವ ಕ್ರೀಡಾಳುಗಳಿಗೆ ಸರ್ಕಾರಿ ಹುದ್ದೆ ದೊರೆಯುವಂತೆ ಮಾಡಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ವಿಶ್ವಕಪ್ನ ಸೆಮಿಫೈನಲ್ನಲ್ಲಿ ಕೌರ್ ಅವರು 115 ಬಾಲ್ಗಳಿಗೆ 171ರನ್ ಗಳಿಸಿ ನಾಟೌಟ್ ಆಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.