ನವದೆಹಲಿ: ಸಹೋದರತೆಯನ್ನು ಪಸರಿಸುವುದಕ್ಕಾಗಿ ಮುಸ್ಲಿಂ ರಾಷ್ಟ್ರೀಯ ಮಂಚ್ ದೇಶದಾದ್ಯಂತ ರಕ್ಷಾ ಬಂಧನ ಅಭಿಯಾನವನ್ನು ಆಚರಿಸಲು ನಿರ್ಧರಿಸಿದೆ.
ಆಗಸ್ಟ್ 7ರಂದು ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಈ ಅಭಿಯಾನಕ್ಕೆ ಚಾಲನೆ ದೊರಕಲಿದೆ. ಆಗಸ್ಟ್ 5 ಮತ್ತು ೬ರಂದು ದೆಹಲಿ, ಲಕ್ನೋಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ಒಟ್ಟು 12 ರಾಜ್ಯಗಳಲ್ಲಿ ರಕ್ಷಾ ಬಂಧನ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ.
‘ಈ ಕಾರ್ಯಕ್ರಮದ ವೇಳೆ ಮುಸ್ಲಿಂ ಸಹೋದರಿಯರು ಹಿಂದೂ ಸಹೋದರರ ಮತ್ತು ಹಿಂದೂ ಸಹೋದರಿಯರು ಮುಸ್ಲಿಂ ಸಹೋದರರ ಕೈಗಳಿಗೆ ರಾಖಿ ಕಟ್ಟಿ, ಪರಸ್ಪರ ರಕ್ಷಣೆಯ ಪ್ರಮಾಣ ಮಾಡಲಿದ್ದಾರೆ’ ಎಂದು ಮಂಚ್ನ ಮುಖಂಡ ಮೊಹಮ್ಮದ್ ಅಫ್ಜಲ್ ತಿಳಿಸಿದ್ದಾರೆ.
ಆಗಸ್ಟ್ ತಿಂಗಳಿನ ಕೊನೆಯವರೆಗೂ ಈ ಅಭಿಯಾನ ಮುಂದುವರೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.