ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಅಬು ದುಜಾನಾನನ್ನು ಹತ್ಯೆಗೈಯ್ಯಲಾಗಿದೆ.
ಮಂಗಳವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಪುಲ್ವಾಮದಲ್ಲಿ ಕಾರ್ಯಾಚರಣೆ ನಡೆಸಿದ್ದು ಎನ್ಕೌಂಟರ್ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಅಬು ದುಜಾನಾ ಮತ್ತು ಇನ್ನೊಬ್ಬ ಉಗ್ರ ಆರಿಫ್ ಲಾಹಿರಿಯನ್ನು ಹತ್ಯೆ ಮಾಡಲಾಗಿದೆ.
ಗುಪ್ತಚರ ಇಲಾಖೆಯ ಮಾಹಿತಿಯ ಪ್ರಕಾರ ಪುಲ್ವಾಮಾದ ಹರ್ಕಿಮಾ ಗ್ರಾಮದಲ್ಲಿ 2-3 ಉಗ್ರರು ಅಗಡಿ ಕುಳಿತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ 4.30 ರ ಸುಮಾರಿಗೆ 55 ರಾಷ್ಟ್ರೀಯ ರೈಫಲ್ಸ್, 183 ಬಟಾಲಿಯನ್, ಸಿಆರ್ಪಿಎಫ್, 182 ಬಟಾಲಿಯನ್, ವಿಶೇಷ ಕಾರ್ಯಾಚರಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ಪ್ರಾರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಲಷ್ಕರ್ ಉಗ್ರ ಸಂಘಟನೆಯ ಕಮಾಂಡರ್ ಆದ ಅಬು ದುಜಾನಾ ಮತ್ತು ಇನ್ನೋರ್ವ ಉಗ್ರ ಆರಿಫ್ ಲಾಹಿರಿಯನ್ನು ಹತ್ಯೆಗೈಯ್ಯಲಾಗಿದೆ.
ವಸತಿ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಹೊರಗೆಳೆಯಲು ಭದ್ರತಾ ಪಡೆಗಳು ಮನೆಗೆ ಬೆಂಕಿಯನ್ನು ಹಚ್ಚಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.