ನವದೆಹಲಿ : ಕೇಂದ್ರ ಸರ್ಕಾರವು ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಆಗಸ್ಟ್ 31 ರ ವರೆಗೆ ಅವಕಾಶವನ್ನು ವಿಸ್ತರಿಸಿದೆ. ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ (ಸಿಬಿಡಿಟಿ) ಸಹ ಇದನ್ನು ಘೋಷಿಸಿದೆ. ಒಂದೊಮ್ಮೆ ಆಗಸ್ಟ್ 31 ರೊಳಗೆ ಆಧಾರ್ ಪ್ಯಾನ್ ಲಿಂಕ್ ಮಾಡದಿದ್ದಲ್ಲಿ ಪ್ಯಾನ್ ಕಾರ್ಡ್ ರದ್ದಾಗುವ ಸಂಭವವೂ ಇದೆ ಎಂಬ ಎಚ್ಚರಿಕೆಯನ್ನು ನೀಡಿದೆ.
ಆಧಾರ್ ಮತ್ತು ಪ್ಯಾನ್ ಲಿಂಕ್ ಬಳಿಕವೇ ಆದಾಯ ತೆರಿಗೆ ಲೆಕ್ಕ ಪತ್ರ ಮಾಹಿತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ಮೊದಲು ಜುಲೈ 31 ಕ್ಕೆ ಆದಾಯ ತೆರಿಗೆ ಲೆಕ್ಕಪತ್ರ ವಿವರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಆದರೆ ನಿನ್ನೆ ತೆರಿಗೆದಾರರು ಎದುರಿಸಿದ ಕೆಲವು ಅಡಚಣೆಗಳಿಂದಾಗಿ ಆದಾಯ ತೆರಿಗೆ ಇಲಾಖೆಯು ಐ.ಟಿ ರಿಟರ್ನ್ಸ್ ಸಲ್ಲಿಸಲು ಆಗಸ್ಟ್ 5 ರವರೆಗೆ ಕಾಲಾವಕಾಶ ನೀಡಿದೆ.
ಇದೀಗ ಆಗಸ್ಟ್ 31 ರೊಳಗೆ ಆಧಾರ್ – ಪ್ಯಾನ್ ಲಿಂಕ್ ಮಾಡದಿದ್ದಲ್ಲಿ ಪ್ಯಾನ್ ಕಾರ್ಡ್ ರದ್ದಾಗಬಹುದೆಂಬ ಮಾಹಿತಿಯನ್ನು ಆದಾಯ ತೆರಿಗೆ ಕಾರ್ಯದರ್ಶಿ ಹಸ್ಮುಖ್ ಅಧಿಯಾ ಅವರು ಹೇಳಿದ್ದಾರೆ.
ಹೀಗಾಗಿ ಇನ್ನೂ ಯಾರೆಲ್ಲಾ ಆಧಾರ್ ಪ್ಯಾನ್ ಲಿಂಕ್ ಮಾಡದೇ ಇದ್ದರೆ ಆಗಸ್ಟ್ 31ರೊಳಗೆ ಲಿಂಕ್ ಮಾಡಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.