ಗೌಹಾಟಿ : ಅಸ್ಸಾಂನ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು.
ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ನಾಗಾಲ್ಯಾಂಡ್ಗಳಲ್ಲಿನ ಬಹುತೇಕ ಪ್ರದೇಶಗಳು ಪ್ರವಾಹ ಪೀಡಿತವಾಗಿದ್ದು, ಭಾರೀ ಮಳೆ ಮತ್ತು ಪ್ರವಾಹಕ್ಕೆ ಅನೇಕರು ಬಲಿಯಾಗಿದ್ದಾರೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ.
ಇಂದು ಗೌಹಾಟಿಯ ಲೋಕೋಪ್ರಿಯ ಗೋಪಿನಾಥ್ ಬೋರ್ಡೋಲಾಯ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲರಾದ ಬನ್ವರಿಲಾಲ್ ಪುರೋಹಿತ್ ಮತ್ತು ಅಸ್ಸಾಂನ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಬರಮಾಡಿಕೊಂಡರು.
ಪ್ರವಾಹ ಪೀಡಿತ ರಾಜ್ಯಗಳಾದ ಅರುಣಾಚಲ ಪ್ರದೇಶ, ಮಣಿಪುರ, ಅಸ್ಸಾಂ, ನಾಗಾಲ್ಯಾಂಡ್ನ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಸಮೀಕ್ಷೆ ನಡೆಸಿದರು ಹಾಗೂ ಸಂತ್ರಸ್ತರಿಗೆ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ನೆರವೇರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಿನ್ನೆಯಷ್ಟೇ ಕೇಂದ್ರ ಸರ್ಕಾರವು ಈಶಾನ್ಯ ರಾಜ್ಯಗಳಲ್ಲಿ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವನ್ನು ಘೋಷಿಸಿತ್ತು.
ಈಶಾನ್ಯ ರಾಜ್ಯಗಳಲ್ಲಿ ತಲೆದೋರುತ್ತಿರುವ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವುದು ಇಂದು ಪ್ರಧಾನಿ ಮೋದಿ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿದ ಮುಖ್ಯ ಉದ್ದೇಶವಾಗಿತ್ತು ಎಂದು ರಾಜ್ಯ ಹಣಕಾಸು ಸಚಿವ ಹಿಮಂತ್ ಬಿಸ್ವ ಸರ್ಮಾ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.