ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್ಗೆ ಇನ್ನಿಲ್ಲದ ರೀತಿಯಲ್ಲಿ ಭದ್ರತೆಯನ್ನು ನೀಡಲಾಗುತ್ತದೆ. ಸೇನಾ ಕಮಾಂಡೋಗಳು ಶಸ್ತ್ರಸಜ್ಜಿತ ರೀತಿಯಲ್ಲಿ ಯಾವುದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿ ಇಲ್ಲಿ ನಿಲ್ಲುತ್ತಾರೆ. ಈ ಬಾರಿ ಈಶಾನ್ಯದ 41 ಮಹಿಳಾ ಕಮಾಂಡೊಗಳು ಕೂಡ ಈ ಕಾರ್ಯದಲ್ಲಿ ಕೈಜೋಡಿಸಲಿದ್ದಾರೆ.
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್ನಲ್ಲಿ ಈಶಾನ್ಯ ಭಾರತದ 41 ಮಹಿಳಾ ಕಮಾಂಡೋಗಳು ಕಣ್ಗಾವಲು ಇರಲಿದ್ದಾರೆ. ಇದಕ್ಕಾಗಿ ಅವರು ಜರೋಡ ಕಲಾನ್ನಲ್ಲಿ ಅಡ್ವಾನ್ಸ್ ಟ್ರೈನಿಂಗ್ ಪಡೆದುಕೊಳ್ಳುತ್ತಿದ್ದಾರೆ.
ಮಹಿಳಾ ಜಿಹಾದಿಗಳು ಈ ಬಾರಿ ದೆಹಲಿಯನ್ನು ಟಾರ್ಗೆಟ್ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನಲೆಯಲ್ಲಿ ಈ ಕಮಾಂಡೋಗಳನ್ನು ನಿಯೋಜನೆ ಮಾಡಲಾಗುತ್ತಿದೆ.
ಈ ಮಹಿಳಾ ಕಮಾಂಡೋಗಳನ್ನು ಕಾನ್ಸೆಸ್ಟೇಬಲ್ಗಳಾಗಿ ನಿಯೋಜನೆ ಮಾಡಲಾಗಿದ್ದು, 10 ತಿಂಗಳ ಕಠಿಣ ತರಬೇತಿ ಪಡೆದುಕೊಂಡಿದ್ದಾರೆ. ಇದೀಗ 4 ತಿಂಗಳ ಅಡ್ವಾನ್ಸ್ ತರಬೇತಿ ಪಡೆಯುತ್ತಿದ್ದಾರೆ.
ಪರಾಕ್ರಮ್ ವ್ಯಾನನಲ್ಲೂ ಇವರು ನಿಯೋಜಿತರಾಗಲಿದ್ದಾರೆ. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲೂ ಇವರನ್ನು ಸೇರಿಸಿಕೊಳ್ಳಲಾಗುತ್ತದೆ ಎಂದು ವಕ್ತಾರರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.