ನವದೆಹಲಿ: ದೇಶದಾದ್ಯಂತ ನಕಲಿ ವಿಶ್ವವಿದ್ಯಾಲಯಗಳು ನಾಯಿಕೊಡೆಗಳಂತೆ ಬೆಳೆಯುತ್ತಿದೆ. ಇದರ ವಿರುದ್ಧ ಉನ್ನತ ಶಿಕ್ಷಣದ ಸರ್ವೋಚ್ಛ ಮಂಡಳಿ ಯುಜಿಸಿ ಸಮರ ಆರಂಭಿಸಿದೆ. ಈ ಬಗ್ಗೆ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಪ್ರಸ್ತಾವಣೆ ಸಲ್ಲಿಸಿರುವ ಅದು, ಯುಜಿಸಿ ಕಾಯ್ದೆ 1956ಕ್ಕೆ ತಿದ್ದುಪಡಿ ತರುವಂತೆ ಮನವಿ ಮಾಡಿದೆ.
1956ರ ಕಾಯ್ದೆಯಡಿ ನಕಲಿ ವಿಶ್ವವಿದ್ಯಾಲಯದ ಮೂಲಕ ವಿದ್ಯಾರ್ಥಿಗಳನ್ನು ವಂಚಿಸುವ ಅಪರಾಧಿಗಳಿಗೆ ಕೇವಲ 1 ಸಾವಿರ ದಂಡವನ್ನು ವಿಧಿಸಲಾಗಿದೆ. ಅದನ್ನು 50 ಲಕ್ಷಕ್ಕೆ ಏರಿಸಬೇಕು ಮತ್ತು 10 ವರ್ಷಗಳ ಕಠಿಣ ಸೆರೆವಾಸವನ್ನು ವಿಧಿಸಬೇಕು ಎಂದು ಯುಜಿಸಿ ಹೇಳಿದೆ.
2000ನೇ ಇಸವಿಯಿಂದಲೂ ಯುಜಿಸಿ ಪತ್ರ ಬರೆದು ಕಾಯ್ದೆಗೆ ತಿದ್ದುಪಡಿ ತರುವಂತೆ ಮನವಿ ಮಾಡುತ್ತಿದೆ. ಆದರೂ ಇದುವರೆಗೂ ಅದು ಸಾಧ್ಯವಾಗಿಲ್ಲ. ಈಗಿನ ನರೇಂದ್ರ ಮೋದಿ ಸರ್ಕಾರವಾದರೂ ಯುಜಿಸಿ ಮನವಿಗೆ ಸ್ಪಂದಿಸಿ ನಕಲಿ ವಿಶ್ವವಿದ್ಯಾಲಯದ ಹೆಸರಲ್ಲಿ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವವರ ವಿರುದ್ಧ ಕಠಿಣ ಶಿಕ್ಷೆಯನ್ನು ಜಾರಿಗೊಳಿಸುತ್ತದೋ ಎಂದು ಕಾದು ನೋಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.