ಲಕ್ನೋ: ತಮ್ಮ ಸರ್ಕಾರದ ಯೋಜನೆಗಳು ಜನರನ್ನು ತಲುಪಿದೆಯೇ ಎಂಬುದನ್ನು ತಿಳಿಯುವ ಸಲುವಾಗಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಬುಧವಾರದಿಂದ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ.
ಗೋರಖ್ಪುರದಿಂದ ಅವರ ಪ್ರವಾಸ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ 5 ಜಿಲ್ಲೆಗಳಿಗೆ ಭೇಟಿಕೊಡಲಿದ್ದಾರೆ. ಆ.9ರಂದು ಮಹರಾಜ್ಗಂಜ್ ಮತ್ತು ಅ.10ರಂದು ಸಿದ್ಧಾರ್ಥ ನಗರ, ಆ.11ರಂದು ಬಲ್ಲಿಯ, ಆ.12ರಂದು ಅಲಹಾಬಾದ್ಗೆ ಅವರು ಭೇಟಿಕೊಡಲಿದ್ದಾರೆ ಎಂದು ಯುಪಿ ಬಿಜೆಪಿ ವಕ್ತಾರ ಶಲಬ್ ಮಣಿ ತ್ರಿಪಾಠಿ ತಿಳಿಸಿದ್ದಾರೆ.
ಜಿಲ್ಲೆಗಳ ಕಾನೂನು ಸುವ್ಯವಸ್ಥೆ, ಆರೋಗ್ಯ, ಸ್ವಚ್ಛತೆ, ವಿದ್ಯುತ್ ಸಮರ್ಪಕತೆಯ ಬಗ್ಗೆ ಅವರು ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲೆಗಳ ಪಕ್ಷದ ಕಾರ್ಯಕರ್ತರನ್ನೂ ಅವರು ಭೇಟಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.