ಹೈದರಾಬಾದ್: ಹೈದರಾಬಾದಿನ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೆಶನ್ ಟೆಕ್ನಾಲಜಿ(ಐಐಐಟಿ-ಹೈದರಾಬಾದ್)ನ ಶೇ.100ರಷ್ಟು ವಿದ್ಯಾರ್ಥಿಗಳು ವಾರ್ಷಿಕ ರೂ.13.4 ಲಕ್ಷದಿಂದ ರೂ.18.8 ಲಕ್ಷದವರೆಗೆ ವೇತನ ಸಿಗುವ ಉದ್ಯೋಗವನ್ನು ಗಿಟ್ಟಿಸಿಕೊಂಡಿದ್ದಾರೆ.
116 ಕಂಪನಿಗಳು ಇಲ್ಲಿ ಪ್ಲೇಸ್ಮೆಂಟ್ ಆಯೋಜನೆ ಮಾಡಿದ್ದು, ಶೇ.100ರಷ್ಟು ವಿದ್ಯಾರ್ಥಿಗಳು ಉದ್ಯೋಗವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಐಐಐಟಿ-ಹೈದರಾಬಾದ್ ಪ್ರಕಟನೆಯಲ್ಲಿ ತಿಳಿಸಿದೆ.
ಮಂಗಳವಾರ ಈ ಸಂಸ್ಥೆ 16ನೇ ಘಟಿಕೋತ್ಸವನ್ನು ಆಚರಿಸಿದ್ದು, ಇಲ್ಲಿ 473 ವಿದ್ಯಾರ್ಥಿಗಳು ಪದವಿ ಪಡೆದುಕೊಂಡಿದ್ದಾರೆ. ಇದರಲ್ಲಿ 84 ಸಂಶೋಧನಾ ವಿದ್ಯಾರ್ಥಿಗಳೂ ಸೇರಿದ್ದಾರೆ.
ತನ್ನ ಶೇ.100ರಷ್ಟು ವಿದ್ಯಾರ್ಥಿಗಳು ವಾರ್ಷಿಕ 13.4 ಲಕ್ಷ ರೂಪಾಯಿ ಮೇಲ್ಪಟ್ಟ ವೇತನದ ಉದ್ಯೋಗ ದಕ್ಕಿಸಿಕೊಂಡಿರುವುದು ಈ ಸಂಸ್ಥೆ ಸಂತಸ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.