ನವದೆಹಲಿ: ಭದ್ರತೆ ಮತ್ತು ಡಾಟಾ ಲೀಕೇಜ್ಗಳ ಕಾಳಜಿಯ ಹಿನ್ನಲೆಯಲ್ಲಿ ಸರ್ಕಾರ ಚೀನಾದಿಂದ ಬೃಹತ್ ಪ್ರಮಾಣದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವಸ್ತುಗಳ ಆಮದುಗಳನ್ನು ಸರ್ಕಾರ ಪರಿಶೀಲನೆಗೊಳಪಡಿಸುತ್ತಿದೆ.
ಚೀನಾದಿಂದ ಬೃಹತ್ ಪ್ರಮಾಣದಲ್ಲಿ ವಸ್ತುಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ನಿರ್ಬಂಧ ವಿಧಿಸಬೇಕು ಎಂಬ ಬೆಡಿಕೆಗಳು ಕೇಳಿ ಬರುತ್ತಿವೆ. ಗಡಿಯಲ್ಲಿ ಉಭಯ ದೇಶಗಳ ನಡುವೆ ಏರ್ಪಟ್ಟಿರುವ ಉದ್ವಿಗ್ನ ಪರಿಸ್ಥಿತಿ ಇದಕ್ಕೆ ಕಾರಣ.
ಇಂಡಸ್ಟ್ರಿ ಚೇಂಬರ್ ಸಿಐಐನ ಇತ್ತೀಚಿನ ವರದಿಯ ಪ್ರಕಾರ ಭಾರತದೊಳಗೆ ಚೀನಾದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಕಂಪನಿಗಳು ಬರೋಬ್ಬರಿ 22 ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತಿವೆ. ಇದು ಸರ್ಕಾರಕ್ಕೆ ಎಚ್ಚರಿಕೆಯ ಕರೆ ಗಂಟೆಯಾಗಿದ್ದು, ಜನರ, ಉದ್ಯಮಗಳ, ಸರ್ಕಾರದ ಸೆಟ್ ಅಪ್ಗಳ ಬಗೆಗಿನ ಮಹತ್ವದ ಮಾಗಿತಿ ಲೀಕ್ ಆಗುವ ಭಯವೂ ಕಾಡುತ್ತಿದೆ.
ಈ ಹಿನ್ನಲೆಯಲ್ಲಿ ಚೀನಾದಿಂದ ಎಲೆಕ್ಟ್ರಾನಿಕ್, ಮಾಹಿತಿ ತಂತ್ರಜ್ಞಾನ ವಸ್ತುಗಳ ಆಮದುಗಳನ್ನು ಪರಿಶೀಲನೆ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.