ಶ್ರೀನಗರ: ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರ ಮುಂಬರುವ ವರ್ಷಗಳಲ್ಲಿ ಪ್ರಮುಖ ಪರಿವರ್ತನೆ ಕಾಣಲಿದೆ, ರಾಜ್ಯ ಸರ್ಕಾರವೂ ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿದೆ.
ಶ್ರೀನಗರದ ಹಳೆಯ ನಗರಗಳನ್ನು ಅಭಿವೃದ್ಧಿಪಡಿಸಲು ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಬರೋಬ್ಬರಿ 1 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶ್ರೀನಗರ ಮಹಾನಗರ ಪಾಲಿಕೆಯ ಶಫ್ಕತ್ ಖಾನ್ ತಿಳಿಸಿದ್ದಾರೆ.
ಸ್ಮಾರ್ಟ್ಸಿಟಿ ಯೋಜನೆಯಡಿ ವಿಪತ್ತು ನಿರ್ವಹಣೆ, ತ್ಯಾಜ್ಯ ನಿರ್ವಹಣೆಗಳನ್ನು ಪರಿಚಯಿಸಲಾಗುವುದು ಮತ್ತು ಅಭಿವೃದ್ಧಿಪಡಿಸಲಾಗುವುದು. ಅಲ್ಲದೇ ನದಿಗಳನ್ನು ಸುಂದರಗೊಳಿಸಲಾಗುವುದು, ಸಿವಿಲ್ ಲೈನ್ ಏರಿಯಾಗಳನ್ನು ಅಭಿವೃದ್ಧಿಪಡಿಸಲಾಗುವುದು, ಸೈಕಲ್ ಟ್ರ್ಯಾಕ್ಗಳನ್ನು ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಅಲ್ಲದೇ ಸ್ಮಾರ್ಟ್ಸಿಟಿ ಯೋಜನೆಯಡಿ ಸ್ಮಾರ್ಟ್ ಬಸ್ಗಳನ್ನು, ಜಿಪಿಎಸ್ಗಳನ್ನು. ಕ್ರಾಫ್ಟ್ ಸೆಂಟರ್ಗಳನ್ನು, ಬ್ಯುಸಿನೆಸ್ ಜಿಲ್ಲೆಗಳನ್ನು ಶ್ರೀನಗರ ಹೊಂದಲಿದೆ. ಸ್ಮಾರ್ಟ್ ಮತ್ತು ಇಂಟೆಲಿಜೆಂಟ್ ಟ್ರಾಫಿಕ್ ಲೈಟ್ಗಳೂ ಇರಲಿವೆ ಎಂದಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಗೆ ತಗಲುವ ಒಟ್ಟು ವೆಚ್ಚ 3500 ಕೋಟಿ ರೂಪಾಯಿಗಳು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.