ನವದೆಹಲಿ: ಕೇವಲ ಸರ್ಕಾರದ ಪ್ರತಿನಿಧಿಗಳು ಮಾತ್ರವಲ್ಲ, ಸಾಮಾನ್ಯ ನಾಗರಿಕರು ಕೂಡ ಇನ್ನು ಮುಂದೆ ಪದ್ಮ ಪ್ರಶಸ್ತಿಗಳಿಗಾಗಿ ಹೆಸರನ್ನು ನಾಮನಿರ್ದೇಶನಗೊಳಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಚಾಂಪಿಯನ್ ಆಫ್ ಚೇಂಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ.
ನಾಗರಿಕ ಪ್ರಶಸ್ತಿಗಳಿಗಾಗಿ ಇರುವ ಸರ್ಕಾರದ ವೆಬ್ಸೈಟ್ನಲ್ಲಿ ಖಾಸಗಿ ವ್ಯಕ್ತಿಗಳು ಪದ್ಮ ಪ್ರಶಸ್ತಿ ಸಮಿತಿಗೆ ಹೆಸರುಗಳನ್ನು ಕಳುಹಿಸಿಕೊಡಬಹುದಾಗಿದೆ.
ಲಾಗಿನ್ ಆಗಿ, ನಾಮನಿರ್ದೇಶನಗೊಳಿಸಲು ಸಾಮಾನ್ಯ ಜನರಿಗೆ ಈ ವೆಬ್ಸೈಟ್ನಲ್ಲಿ ರಿಜಿಸ್ಟ್ರೇಶನ್ ಸೌಲಭ್ಯವನ್ನು ನೀಡಲಾಗಿದೆ.
ಪ್ರಧಾನಿಗಳು ರಚಿಸುವ ಪದ್ಮ ಪ್ರಶಸ್ತಿ ಸಮಿತಿಯಲ್ಲಿ ಸಂಪುಟದ ಕಾರ್ಯದರ್ಶಿಗಳು ಇರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.