ಲಕ್ನೋ: ಕಾಶ್ಮೀರ ಸಮಸ್ಯೆ, ಭಯೋತ್ಪಾದನೆ, ನಕ್ಸಲಿಸಂ, ಈಶಾನ್ಯ ಬಂಡಾಯದ ಸಮಸ್ಯೆಗಳಿಗೆ 2022ರ ವೇಳೆಗೆ ಪರಿಹಾರ ಸಿಗಲಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲಕ್ನೋದಲ್ಲಿ ‘ಸಂಕಲ್ಪ ಸೆ ಸಿದ್ಧಿ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೇಶ ಕಾಶ್ಮೀರ ಸಮಸ್ಯೆ, ಭಯೋತ್ಪಾದನೆ, ಈಶಾನ್ಯದ ಬಂಡಾಯ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಈ ಎಲ್ಲಾ ಸಮಸ್ಯೆಗಳಿಗೆ 2022ರ ವೇಳೆಗೆ ಪರಿಹಾರ ಸಿಗಲಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ 2022ರ ವೇಳೆಗೆ ನವ ಭಾರತ ಸೃಷ್ಟಿಯ ಪಣತೊಟ್ಟಿದೆ’ ಎಂದರು.
ಭಾರತೀಯರಿಗೆ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಹೆಚ್ಚಾಗಿ ಹೇಳಬೇಕಾಗಿಲ್ಲ. ಆದರೆ ನಾವು ಸಂಕಲ್ಪ ತೊಟ್ಟರೆ 2022ರ ವೇಳೆಗೆ ನವ ಭಾರತದ ಉದಯ ಸಾಧ್ಯ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.