ನವದೆಹಲಿ: ಏರ್ಇಂಡಿಯಾ ಮುಖ್ಯಸ್ಥ ಮತ್ತು ಆಡಳಿತ ನಿರ್ದೇಶಕ ಅಶ್ವನಿ ಲೊಹಾನಿ ಅವರು ಗುರುವಾರ ರೈಲ್ವೇ ಬೋರ್ಡ್ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲೊಹಾನಿಯಾ, ‘ರೈಲ್ವೇ ಬೋರ್ಡ್ ಮುಖ್ಯಸ್ಥನಾಗಿ ನನ್ನನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ ನಾನು ನನ್ನ ತವರು ಮಂಡಳಿಯನ್ನು ಗುರುವಾರ ಸೇರ್ಪಡೆಗೊಳ್ಳುತ್ತಿದ್ದೇನೆ’ ಎಂದಿದ್ದಾರೆ.
ಏರ್ ಇಂಡಿಯಾದೊಂದಿಗಿನ ಪ್ರಯಾಣ ಅತ್ಯಂತ ತೃಪ್ತಿಕರವಾಗಿತ್ತು ಎಂದಿದ್ದಾರೆ.
ಈ ಹಿಂದೆ ಲೊಹಾನಿ ಅವರು ಡಿವಿಜನಲ್ ರೈಲ್ವೇ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.