ನವದೆಹಲಿ: ಪ್ಲಾಸ್ಟಿಕ್ ಬ್ಯಾಗ್ಗಳಿಗೆ ನಿಷೇಧ ವಿಧಿಸಿರುವ ದೆಹಲಿಯಲ್ಲಿ ಕಳೆದ ಎರಡು ವಾರಗಳಿಂದ ಜಿಲ್ಲಾಡಳಿತ ಬರೋಬ್ಬರಿ 8 ಸಾವಿರ ಕಿಲೋಗ್ರಾಂ ಪ್ಲಾಸ್ಟಿಕ್ ವಶಪಡಿಸಿಕೊಂಡಿವೆ. ಅಲ್ಲದೇ ರೂ.3 ಲಕ್ಷವನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ.
ರಾಷ್ಟ್ರೀಯ ಹಸಿರು ಪೀಠ ಆ.10ರಂದು ದೆಹಲಿಯಲ್ಲಿ 50 ಮೈಕ್ರೋನ್ಸ್ಗಳಿಗಿಂತ ತೆಳುವಿರುವ ಪ್ಲಾಸ್ಟಿಕ್ ವಸ್ತುಗಳಿಗೆ ನಿಷೇಧ ಹೇರಿತ್ತು. ಅಲ್ಲದೇ 5,000 ರೂ ದಂಡ ಘೋಷಿಸಿತ್ತು. ಇದೀಗ ಅಲ್ಲಿನ ಜಿಲ್ಲಾಡಳಿತ ಇಂತಹ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಸಮರ ಸಾರಿದೆ.
ನಿಷೇಧವನ್ನು ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಆದಾಯ ಇಲಾಖೆ, ಪರಿಸರ ಇಲಾಖೆ, ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಗತಿ ಪರಿಶೀಲನೆಗಳನ್ನು ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.