ನವದೆಹಲಿ: ಭಾರತ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದ್ಯೂಬ ಮತ್ತು ಪ್ರಧಾನಿ ನರೇಂದ್ರ ಮೋದಿ ಗುರುವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಪರಸ್ಪರ 8 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್ನಲ್ಲಿ ಉಭಯ ದೇಶಗಳ ನಡುವೆ ನಿಯೋಗ ಮಟ್ಟದ ಮಾತುಕತೆ ನಡೆದಿದ್ದು, ಈ ವೇಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೂ ಉಪಸ್ಥಿತರಿದ್ದರು.
ಮಾದಕ ದ್ರವ್ಯ ಸಾಗಾಣೆ ಸೇರಿದಂತೆ ಒಟ್ಟು 8 ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಹಾಕಿವೆ.
ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ನೇಪಾಳದ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯ ಭಾಗವಾಗಿರುವುದು ಭಾರತಕ್ಕೆ ಗೌರವ ತಂದಿದೆ’ ಎಂದರು.
ಆರ್ಥಿಕತೆ, ಎನರ್ಜಿ, ಜಲ ಸಂಪನ್ಮೂಲ, ಸಂಪರ್ಕ ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.