ಮುಂಬಯಿ: ಮಳೆಗೆ ಮುಂಬಯಿ ಮಹಾನಗರ ಅಕ್ಷರಶಃ ನಲುಗಿದ್ದು, ರೈಲು ಸಂಪರ್ಕ, ರಸ್ತೆ ಸಂಪರ್ಕ ಮತ್ತು ವಾಯು ಸಂಪರ್ಕ ಸ್ಥಗಿತಗೊಂಡಿದೆ. ಜನಜೀವನ ಅಸ್ತವ್ಯಸ್ತವಾಗಿದ್ದು, 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮುಂದಿನ 24 ಗಂಟೆಗಳ ಕಾಲ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿ ಘಟನೆಗಳಿಂದ 5 ಮಂದಿ ಸಾವಿಗೀಡಾಗಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ 3 ಮಂದಿ ಮನೆ ಕುಸಿತದಿಂದ ಸಾವಿಗಿಡಾಗಿದ್ದಾರೆ.
ಮುಂದಿನ 2-3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, 24 ಗಂಟೆಗಳ ಕಾಲ ‘ರೆಡ್ ಅಲರ್ಟ್’ ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.