ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಸಚಿವರಾದ ಕೇಶವ್ ಪ್ರಸಾದ್ ಮೌರ್ಯ ಹಾಗೂ ದಿನೇಶ್ ಶರ್ಮಾ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಬುಧವಾರ ಘೋಷಣೆ ಮಾಡಿದೆ.
ಅಷ್ಟೇ ಅಲ್ಲದೇ ಸಚಿವರಾದ ಸ್ವತಂತ್ರ ದೇವ್ ಸಿಂಗ್ ಮತ್ತು ಮೊಹ್ಸೀನ್ ರಾಝಾ ಅವರೂ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.
ಯೋಗಿ ಮತ್ತು ಅವರ ಸಹ ಸಚಿವರು ಉತ್ತರಪ್ರದೇಶದ ವಿಧಾನ ಸಭೆ ಅಥವಾ ವಿಧಾನ ಪರಿಷತ್ಗೆ ಆಯ್ಕೆಯಾಗುವುದು ಅನಿವಾರ್ಯವಾಗಿದೆ.
ಸೆ.18ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತಯೆಣಿಕೆ ಕಾರ್ಯವೂ ಜರುಗಲಿದೆ.