ನವದೆಹಲಿ: ಕೇಂದ್ರ ಗೃಹ ವ್ಯವಹಾರ ಸಚಿವಾಲಯದ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೀವ್ ಗಾಬಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ರಾಜೀವ್ ಗಾಬಾ ಅವರು 1982ರ ಬ್ಯಾಚ್ನ ಜಾರ್ಖಾಂಡ್ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಜಾರ್ಖಾಂಡ್ನ ಮುಖ್ಯ ಕಾರ್ಯದರ್ಶಿಯಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ.
ಈ ಹಿಂದೆಯೂ ಕೇಂದ್ರ ಗೃಹ, ರಕ್ಷಣಾ, ಪರಿಸರ ಮತ್ತು ಅರಣ್ಯ ಸಚಿವಾಲಯ, ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫಾರ್ಮೆಮೇಶನ್ ಟೆಕ್ನಾಲಜಿ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ.
1959ರಲ್ಲಿ ಪಂಜಾಬ್ನಲ್ಲಿ ಜನಿಸಿದ ಇವರು ಭೌತಶಾಸ್ತ್ರ ಪದವೀಧರರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.