ನವದೆಹಲಿ: ಉತ್ತರಪ್ರದೇಶದ ಗೋರಖ್ಪುರದ ಬಿಆರ್ಡಿ ಆಸ್ಪತ್ರೆಯಲ್ಲಿ ಮಕ್ಕಳ ಮಾರಣಹೋಮ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ನೋಡಲ್ ಅಧಿಕಾರಿ, ವೈದ್ಯ ಕಫೀಲ್ ಖಾನ್ ಅವರನ್ನು ಎಸ್ಟಿಎಫ್ ಬಂಧನಕ್ಕೊಳಪಡಿಸಿದೆ.
ಈಗಾಗಲೇ ಕೆಲಸದಿಂದ ವಜಾಗೊಂಡಿರುವ ಕಫೀಲ್, ಬಂಧನಕ್ಕೊಳಪಡಿಸುವ ವೇಳೆಯಲ್ಲಿ ಭಾರತ ತೊರೆದು ನೇಪಾಳಕ್ಕೆ ಹಾರುವ ಪ್ರಯತ್ನದಲ್ಲಿ ಇದ್ದರು ಎನ್ನಲಾಗಿದೆ.
ವರದಿಗಳ ಪ್ರಕಾರ ಇವರು ಬಿಆರ್ಡಿ ಆಸ್ಪತ್ರೆಯ ಸಿಲಿಂಡರ್ಗಳನ್ನು ಕದ್ದು ಖಾಸಗಿಯವರಿಗೆ ಮಾರಾಟ ಮಾಡುವ ದಂಧೆಯಲ್ಲಿ ತೊಡಗಿದ್ದರು.
ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಫೀಲ್ 3ನೇ ಆರೋಪಿಯಾಗಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ.
ಪ್ರಕರಣ ತನಿಖೆಗೆ ಸಿಎಂ ಯೋಗಿ ಅದಿತ್ಯನಾಥ ಅವರು ಸಮಿತಿಯೊಂದನ್ನು ರಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.