Monday, 25th September 2017
×
Home About Us Advertise With s Contact Us

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ : ಸಂತಾಪ ವ್ಯಕ್ತಪಡಿಸಿದ ಆರ್­ಎಸ್­ಎಸ್

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಆರ್­ಎಸ್­ಎಸ್­ನ ಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಅವರು ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಹಿರಿಯ ಪತ್ರಕರ್ತೆ, ಲೇಖಕಿ, ವಿಚಾರವಾದಿಯಾಗಿದ್ದ ಗೌರಿ ಲಂಕೇಶ್ ಹತ್ಯೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರವಾಗಿ ಖಂಡಿಸುತ್ತದೆ. ಗೌರಿ ಲಂಕೇಶರ ಈ ದಾರುಣ ಹತ್ಯೆಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಅವರ ಕುಟುಂಬದವರಿಗೆ ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘವು ಪ್ರಾರ್ಥಿಸುತ್ತದೆ. ರಾಜ್ಯ ಸರ್ಕಾರವು ಶೀಘ್ರವಾಗಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ನ್ಯಾಯ ಒದಗಿಸಬೇಕೆಂದು  ರಾಷ್ಟ್ರೀಯ ಸ್ವಯಂಸೇವಕ ಸಂಘ ಆಗ್ರಹಿಸುತ್ತದೆ ಎಂದು ವಿ. ನಾಗರಾಜ್ ಹೇಳಿದ್ದಾರೆ.

Leave a Reply

Your email address will not be published. Required fields are marked *

10 − 3 =

 

 

 

 

 

 

 

 

 

Recent News

Back To Top