ನವದೆಹಲಿ: 2018ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಒಟ್ಟು 15,700 ಮಂದಿ ಅರ್ಜಿ ಹಾಕಿದ್ದಾರೆ.
ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಪ್ರಕ್ರಿಯೆ ಈಗಲೂ ಮುಂದುವರೆದಿದ್ದು, ಸೆಪ್ಟಂಬರ್ 15 ನಾಮಪತ್ರ ಸ್ವೀಕರಿಸಲು ಕೊನೆಯ ದಿನಾಂಕವಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಇದುವರೆಗೆ ಒಟ್ಟು 15,706 ಜನರು ಪದ್ಮ ಪ್ರಶಸ್ತಿಗಳಿಗೆ ಅರ್ಜಿ ಹಾಕಿದ್ದಾರೆ. ಕಳೆದ ವರ್ಷ ನಾಮಪತ್ರ ಸಲ್ಲಿಸಿದವರ ಸಂಖ್ಯೆ 18,768 ಆಗಿತ್ತು.
ಯಾವುದೇ ವ್ಯಕ್ತಿಯೂ ತಮಗೆ ತಿಳಿದ ಸಾಧಕರ ಹೆಸರನ್ನು ನಾಮನಿರ್ದೇಶನಗೊಳಿಸಬಹುದಾಗಿದೆ.
ಈ ಹಿಂದೆ ಸಚಿವರ ಮತ್ತು ರಾಜಕಾರಣಿಗಳು ಈ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶ ಮಾಡುತ್ತಿದ್ದರು, ಆದರೆ ಈ ವರ್ಷದಿಂದ ಜನಸಾಮಾನ್ಯನೂ ನಾಮನಿರ್ದೇಶನ ಮಾಡಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.