ಶ್ರೀನಗರ: ಪಾಕಿಸ್ಥಾನ ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದಿಂದ ನಿರಾಶ್ರಿತರಾಗಿ ಬಂದಿರುವ ಜನರಿಗೆ ಪುನವರ್ಸತಿ ಕಲ್ಪಿಸಲು ಕೇಂದ್ರ ಸರ್ಕಾರ 2000 ಕೋಟಿ ರೂಪಾಯಿಗಳ ಪ್ಯಾಕೇಜ್ ಒದಗಿಸುತ್ತದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಆಧಾರ್ ವ್ಯವಸ್ಥೆಯ ಮೂಲಕ ನಿರಾಶ್ರಿತ ವ್ಯಕ್ತಿಯ ಪುನವರ್ಸತಿಗೆ ಹಣ ಪೂರೈಸಲಾಗುವುದು ಎಂದಿದ್ದಾರೆ.
ಜಮ್ಮು ಕಾಶ್ಮೀರದ ಯುವಕರೊಂದಿಗೆ ಸಂಪರ್ಕ ಸಾಧಿಸಲು ಕೇಂದ್ರ ಕಣಿವೆಯಿಂದ ವಲಸೆ ಬಂದವರಿಗೆ 3000 ಉದ್ಯೋಗಗಳನ್ನು ನೀಡಲಿದೆ ಎಂದರು. ಇದರಡಿ ಈಗಾಗಲೇ 1080 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ ಎಂದರು.
ವಲಸೆ ಬಂದ ಹಾಗೂ ನಿರಾಶ್ರಿತರಾದವ ಬಗ್ಗೆ ನಾವು ಮಾನವೀಯ ಕ್ರಮ ತೆಗೆದುಕೊಳ್ಳುತ್ತೇವೆ ಆದರೆ ನಾವು ಅಕ್ರಮ ವಲಸೆಯ ವಿರುದ್ಧ ನಿಲ್ಲುತ್ತೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.