ನವದೆಹಲಿ: ಹಲವಾರು ಪ್ರಸ್ತಾವಣೆಗಳಿಗೆ ಅನುಮೋದನೆಗಳನ್ನು ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಪುಟ ಸಭೆಯನ್ನು ನಡೆಸಿದರು.
ಮೂಲಗಳ ಪ್ರಕಾರ ಸೆ.15ರಿಂದ ಅ.2ರವರೆಗೆ ದೇಶದಾದ್ಯಂತ ನಡೆಯುವ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವಂತೆ ಮೋದಿ ತಮ್ಮ ಸಚಿವರುಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಬಗೆಗಿನ ಡಾಕ್ಯುಮೆಂಟರಿಯೊಂದನ್ನು ಸಚಿವರುಗಳಿಗೆ ಪ್ರದರ್ಶಿಸಲಾಗಿದ್ದು, ದೇಶದಾದ್ಯಂತ ಸ್ವಚ್ಛತಾ ಕಾರ್ಯ ನಡೆಸುವಂತೆ ಸೂಚನೆ ನೀಡಿದ್ದಾರೆ.
2019ರ ಅಕ್ಟೋಬರ್ 2 ರವರೆಗೆ ಕೇಂದ್ರ ದೇಶವನ್ನು ಬಯಲು ಶೌಚಮುಕ್ತಗೊಳಿಸುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.