ನವದೆಹಲಿ: ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿ ಮಕ್ಕಳು ದೌರ್ಜನ್ಯಕ್ಕೀಡಾಗುತ್ತಿರುವ ಪ್ರಕರಣಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಶಾಲೆಗಳಿಗೆ ಗೈಡ್ಲೈನ್ ರಚಿಸಲು ಮುಂದಾಗಿದೆ.
ಶಾಲೆಗಳಲ್ಲಿ ಮಕ್ಕಳನ್ನು ಯಾವುದೇ ತರನಾದ ದೌರ್ಜನ್ಯಗಳಿಂದ ಕಾಪಾಡುವ ಸಲುವಾಗಿ ಗೈಡ್ಲೈನ್ಗಳನ್ನು ರಚಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರವು ಸಿಬಿಎಸ್ಸಿ, ಮಕ್ಕಳ ರಕ್ಷಣಾ ಮಂಡಳಿಗಳೊಂದಿಗೆ ಸಭೆ ನಡೆಸಲು ಮುಂದಾಗಿದೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಬುಧವಾರ ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜನೆ ಮಾಡಲಿದ್ದಾರೆ.
ಸಭೆಯಲ್ಲಿ ಎನ್ಸಿಪಿಸಿಆರ್, ಸಿಬಿಎಸ್ಇ, ಎನ್ಸಿಇಆರ್ಟಿ, ಕೇಂದ್ರೀಯ ವಿದ್ಯಾಲಯ ಸಂಘಟನ್ ಭಾಗವಹಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.