ಹೈದರಾಬಾದ್: ಮದುವೆಯ ಹೆಸರಲ್ಲಿ ಯುವತಿಯರನ್ನು ಗಲ್ಫ್ ದೇಶಗಳಿಗೆ ಸಾಗಾಟ ಮಾಡುತ್ತಿದ್ದ ದಂಧೆಯೊಂದನ್ನು ಹೈದರಾಬಾದ್ ಪೊಲೀಸರು ಬೇಧಿಸಿದ್ದಾರೆ. ಪ್ರಕರಣದಲ್ಲಿ ಮುಸ್ಲಿಂ ಧರ್ಮಗುರುಗಳು ಸೇರಿದಂತೆ ಒಟ್ಟು 20 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ.
ಆಗಸ್ಟ್ನಲ್ಲಿ ಅಪ್ರಾಪ್ತೆಯೊಬ್ಬಳನ್ನು ಒಮನ್ ವ್ಯಕ್ತಿಯೊಂದಿಗೆ ಮದುವೆ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸರು ಇದೀಗ 5 ಒಮನ್ ಪ್ರಜೆಗಳನ್ನು, 3 ಕತಾರ್ ಶೇಖ್ಗಳನ್ನು, ಮೂವರು ಖಾಜೀಗಳನ್ನು, 4 ಲಾಡ್ಜ್ ಮಾಲೀಕರನ್ನು, 5 ಮದುವೆ ದಲ್ಲಾಳಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಮುಂಬಯಿ ಮೂಲದ ಮುಖ್ಯ ಖಾಜಿ ಫರೀದ್ ಅಹ್ಮದ್ ಖಾನ್ ಈ ದಂಧೆಯ ಪ್ರಮುಖ ಆರೋಪಿಯಾಗಿದ್ದಾನೆ. ಇವರೆಲ್ಲರ ವಿರುದ್ಧ ಸೆಕ್ಷನ್ 420, 370, ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.