ಭೋಪಾಲ್: ಮಕ್ಕಳಲ್ಲಿ ದೇಶಪ್ರೇಮವನ್ನು ಬೆಳೆಸುವ ಸಲುವಾಗಿ ಎಲ್ಲಾ ಮದರಸಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಮಧ್ಯಪ್ರದೇಶ ಶಿಕ್ಷಣ ಸಚಿವ ವಿಜಯ್ ಶಾ ಕರೆ ನೀಡಿದ್ದಾರೆ.
ಭೋಪಾಲ್ನಲ್ಲಿನ ಮಧ್ಯಪ್ರದೇಶ ಮದರಸ ಮಂಡಳಿಯ 20ನೇ ಸಂಸ್ಥಾಪನ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಪ್ರತಿನಿತ್ಯ ರಾಷ್ಟ್ರಧ್ವಜವನ್ನು ಹಾರಿಸಬೇಕು ಮತ್ತು ಮಕ್ಕಳಿಂದ ರಾಷ್ಟ್ರಗೀತೆಯನ್ನು ಹಾಡಿಸಬೇಕು ಎಂದು ಮಧ್ಯಪ್ರದೇಶದ ಎಲ್ಲಾ ಮದರಸಗಳನ್ನು ನಾನು ಕೋರುತ್ತೇನೆ. ಹೀಗೆ ಮಾಡಲು ಯಾರಿಗೂ ಸಮಸ್ಯೆಯಿಲ್ಲ ಎಂದು ಭಾವಿಸಿದ್ದೇನೆ’ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಲ್ಲಿ ರಾಷ್ಟ್ರವಾದವನ್ನು ಬೆಳೆಸಲು ಸಹಕರಿಸುತ್ತಿರುವ ಮದರಸಗಳ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.