ನವದೆಹಲಿ: ತನ್ನ ಎಲ್ಲಾ ಆಯ್ಕೆಯಾದ ಪ್ರತಿನಿಧಿಗಳಿಗೆ ತರಬೇತಿಯನ್ನು ನೀಡುವ ಸಲುವಾಗಿ ಬಿಜೆಪಿ ಎರಡನೇ ಹಂತದ ಕಾರ್ಯಕ್ರಮವನ್ನು ಆರಂಭಿಸಲು ಸಜ್ಜಾಗಿದೆ.
ಈ ಕಾರ್ಯಕ್ರಮದ ನೀಲನಕ್ಷೆಯನ್ನು ಶೀಘ್ರದಲ್ಲೇ ಸಿದ್ಧಪಡಿಸಲಾಗುತ್ತಿದ್ದು, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇದನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪೊ.ಮುರಳೀಧರ್ ರಾವ್ ಹೇಳಿದ್ದಾರೆ.
ತನ್ನ ಮೊದಲ ಹಂತದ ಕಾರ್ಯಕ್ರಮದಲ್ಲಿ ಪಕ್ಷ ಬರೋಬ್ಬರಿ 10 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಿದ್ದರು, ಎರಡನೇ ಹಂತದ ಕಾರ್ಯಕ್ರಮ ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ಇರಲಿದೆ ಎಂದಿದ್ದಾರೆ.
ಗ್ರಾಮ ಪಂಚಾಯತ್, ನಗರಪಾಲಿಕೆ ಪ್ರತಿನಿಧಿಗಳು, ಶಾಸಕರು, ಸಂಸದರು ಸೇರಿದಂತೆ ಪಕ್ಷದ ಎಲ್ಲಾ ಹಂತದ ಪ್ರತಿನಿಧಿಗಳು ಈ ಕಾರ್ಯಕ್ರಮದ ಭಾಗವಾಗಲಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.